ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ವತಿಯಿಂದ ಪ್ರತಿ ವರ್ಷ ಹಮ್ಮಿಕೊಳ್ಳುವ ಪ್ರತಿಷ್ಠಿತ ಎಕ್ಸೆಲ್ ಅಕ್ಷರೋತ್ಸವ ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಮಂತ್ರಣ ಸಾಂಸ್ಕೃತಿಕ – ಸಾಹಿತ್ಯ ವೇದಿಕೆಯ ದಶಮಾನೋತ್ಸವ ಕಾರ್ಯಕ್ರಮಕ್ಕೆ ದೇಶದ ಮೂಲೆ ಮೂಲೆಗಳಿಂದ ಕವನಗಳನ್ನು ಆಹ್ವಾನಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಪುತ್ತೂರಿನ ವಿವೇಕಾನಂದ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಅನನ್ಯ ಎಚ್ ಸುಬ್ರಹ್ಮಣ್ಯ ರವರ ಕವನವು ಆಯ್ಕೆ ಗೊಂಡಿದೆ.
ಇವರು ಕುಕ್ಕೇ ಸುಬ್ರಹ್ಮಣ್ಯದ ನಿವಾಸಿಗಳಾದ ಗಂಗಾಧರ ಮತ್ತು ಜಯಶ್ರೀ ಯವರ ಸುಪುತ್ರಿ.




























