ಪುತ್ತೂರು : ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಇಬ್ಬರನ್ನೂ ಬದಲಾಯಿಸಿದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭಗೊಂಡಿದೆ.
ಈ ಬದಲಾವಣೆ ಖಂಡಿಸಿಇದೀಗ ಪುತ್ತೂರು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಗ್ರಾಮಾಂತರ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಿಂತನ್ ನೆಲ್ಲಿಕಟ್ಟೆ, ದಯಾರಾಜ್ ತೆಂಕಿಲ ರಾಜೀನಾಮೆ ನೀಡಿದ್ದಾರೆ. ಈ ಇಬ್ಬರು ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಲಭ್ಯ ಮಾಹಿತಿ ಪ್ರಕಾರ ಶ್ರೀನಿವಾಸ ಕಲ್ಯಾಣೋತ್ಸವ ಮುಗಿದ ನಂತರ ಇನ್ನಷ್ಟು ಮಂದಿ ರಾಜೀನಾಮೆ ನೀಡುವ ಸಾಧ್ಯತೆ ಇದೆ.



























