ಗುಂಡ್ಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕು ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಸರಕುಗಳು ರಸ್ತೆ ಮೇಲೆ ಚದುರಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಅದೃಷ್ಟವಶಾತ್ ಲಾರಿಯ ಚಾಲಕ ಹಾಗೂ ಸಿಬ್ಬಂದಿಗಳು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

























