ಕನ್ನಡ ಸಾಹಿತ್ಯ ಪರಿಷತ್ ನೀಡುವ 2021ನೇ ಸಾಲಿನ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಆಳ್ವಾಸ್ ಫೌಂಡೇಶನ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಮೋಹನ್ ಆಳ್ವ ಅವರು ಆಯ್ಕೆಯಾಗಿದ್ದಾರೆ ಎಂದು ಕಸಾಪ ಗೌರವ ಕಾರ್ಯದರ್ಶಿ ಕೆ.ರಾಜಕುಮಾರ್ ತಿಳಿಸಿದ್ದಾರೆ.
ಮಂಗಳವಾರ ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.ಪ್ರಶಸ್ತಿಯು 51ಸಾವಿರ ರೂ.ನಗದು ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.
ಆಯ್ಕೆ ಸಮಿತಿ ಸಭೆಯಲ್ಲಿ ಕಸಾಪ ಸದಸ್ಯರಾದ ಚಿತ್ಕಲಾ, ಗೌರವ ಕಾರ್ಯದರ್ಶಿ ಡಾ.ಪದ್ಮರಾಜ ದಂಡಾವತಿ, ಕೆ.ರಾಜಕುಮಾರ್, ಕೋಶಾಧ್ಯಕ್ಷ ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರೆಂದು ಅವರು ತಿಳಿಸಿದ್ದಾರೆ.