ಸಾಲೆತ್ತೂರು ಮಂಚಿ ಕೊಡಿಬೈಲ್ ಪ್ರದೇಶದಲ್ಲಿ ಟಿಪ್ಪರ್ ಮತ್ತು ಸ್ಕೂಟಿ ನಡುವೆ ಭೀಕರ ಡಿಕ್ಕಿ ಸಂಭವಿಸಿದ ಘಟನೆ ಇಂದು ನಡೆದಿದೆ. ಅಪಘಾತದಲ್ಲಿ ಸ್ಕೂಟಿ ಸವಾರ ಪುರುಷೋತ್ತಮ ಸಾಲ್ಯಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ಬಳಿಕ ಸ್ಥಳೀಯರು ತಕ್ಷಣವೇ ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ ಎನ್ನಲಾಗಿದೆ.
ಸ್ಥಳಕ್ಕೆ ಸಂಬಂಧಿಸಿದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

























