ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ತಪ್ಪು ಅಭಿಪ್ರಾಯ-ಅಪಪ್ರಚಾರ ಹುಟ್ಟು ಹಾಕುವ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಹೋರಾಡುವ ಜೊತೆಗೆ, ಸ್ಥಳೀಯರ ಪಾಲ್ಗೊಳ್ಳುವಿಕೆಯೊಂದಿಗೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನಂತೆ ನಮ್ಮ ‘ಮಂಗಳೂರು 2.0 ಹಾಗೂ ‘ವಿಕಸಿತ ಮಂಗಳೂರು’ ನಿರ್ಮಾಣ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.
ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆದ ಒಂಬತ್ತನೇ ವರ್ಷದ ‘ಮಂಗಳೂರು ಕಂಬಳ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ನಮ್ಮ ನೆಲದ ಭವಿಷ್ಯವನ್ನು ನಮ್ಮವರೇ ರೂಪಿಸಬೇಕು ಮತ್ತು ಇಲ್ಲಿನ ಅಭಿವೃದ್ಧಿಯಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಅತ್ಯಗತ್ಯ. 8 ವರ್ಷದ ಹಿಂದೆ ಆರಂಭಗೊಂಡ ಈ ಕಂಬಳ ತುಳುನಾಡಿನ ಎಲ್ಲ ವರ್ಗದವರು, ಸಮುದಾಯದವರನ್ನು ಒಂದಾಗಿ ಜೋಡಿಸುವಲ್ಲಿ ಯಶಸ್ವಿಯಾಗಿದೆ
9ನೇ ವರ್ಷದ ಈ ಕಂಬಳವನ್ನು ನವವಿಧ-ನವವರ್ಷದ ಕಾರ್ಯಕ್ರಮಗಳೊಂದಿಗೆ ಮಂಗಳೂರು ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ ಎಂದರು.
ಕಂಬಳವನ್ನು ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕಟೀಲು ದುರ್ಗಾಪರಮೇಶ್ವರಿ ದೇವಳದ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಶುಭ ಹಾರೈಸಿದರು.
ಕ್ಯಾ. ಗಣೇಶ್ ಕಾರ್ಣಿಕ್, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ತುಕರಾಮ್ ಪೂಜಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಸುನಿಲ್ ಆಚಾರ್, ವಿನೋದ್ ಶೆಣೈ, ಪ್ರಸಾದ್ ಕುಮಾರ್ ಶೆಟ್ಟಿ, ಜಯಾನಂದ್ ಅಂಚನ್, ಕದ್ರಿ ನವನೀತ್ ಶೆಟ್ಟಿ, ಅನಿಲ್ ಕುಮಾರ್, ಮನೋಹರ್ ಜೋಷಿ, ಕಿರಣ್ ಕುಮಾರ್ ಕೋಡಿಕಲ್, ಶಕೀಲಾ ಖಾವ, ಸಂಧ್ಯಾ ಅಚಾರ್, ಶೋಭಾ ರಾಜೇಶ್, ಹೆಚ್.ಕೆ ಪುರುಷೋತ್ತಮ, ಪ್ರದೀಪ್ ಕುಮಾರ್ ಇದ್ದರು.
























