ಕಾವು: ಬುಶ್ರಾ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಾಂಸ್ಕೃತಿಕ, ಸಭಾ ಕಾರ್ಯಕ್ರಮದೊಂದಿಗೆ 28ನೇ ವರ್ಷದ ವಾರ್ಷಿಕೋತ್ಸವ ‘ಬುವಿ ಉತ್ಸವ- 2025’ ಕಾರ್ಯಕ್ರಮ ಶಾಲಾ ಆವರಣದಲ್ಲಿ ಡಿ.31 ರಂದು ನಡೆಯಲಿದೆ.
ಧ್ವಜಾರೋಹಣ ಕಾರ್ಯಕ್ರಮ: ಬೆಳಿಗ್ಗೆ 9.30 ಕ್ಕೆ ಧ್ವಜಾರೋಹಣವನ್ನು ಬುಶ್ರಾ
ಎಜ್ಯುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಅಬ್ದುಲ್ ಅಝೀಜ್ ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ಬುಶ್ರಾ ಎಜ್ಯುಕೇಶನಲ್ ಟ್ರಸ್ಟನ ನಿರ್ದೇಶಕ ನೂರುದ್ದೀನ್ ಬಿ.ಎ. ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಭಾಗವಹಿಸಲಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಯಿಂದ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಸಭಾ ಕಾರ್ಯಕ್ರಮ: ಸಂಜೆ ಗಂಟೆ 7 ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಬುಶ್ರಾ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಅಬ್ದುಲ್ ಅಜೀಜ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಹಾಯಕ ಮತ್ತು ಆರೋಗ್ಯ ಸೇವಾ ಮಂಡಳಿ ಸಂಚಾಲಕರು ಪ್ರೊಫೆಸರ್ ಇಪ್ಟಿಕರ್ ಆಲಿ, ಆಳ್ವಾಸ್ ಎಜುಕೇಶನಲ್ ಫೌಂಡೇಶನ್ ಮೂಡಬಿದ್ರಿ ಇದರ ಆಡಳಿತ ಟ್ರಸ್ಟಿ ವಿವೇಕ್ ಆಳ್ವ, ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಹಿರಿಯ ವಿದ್ಯಾರ್ಥಿನಿ ಹಾಗೂ ಚಿನ್ನದ ಪದಕ ವಿಜೇತ ಆಯುರ್ವೇದ ತಜ್ಞೆ ಡಾ.ಮೇಘ ಬೋರ್ಕರ್, ಸಂಖ್ಯೆ ಪೊಲೀಸ್ ಠಾಣೆ ಉಪನಿರೀಕ್ಷಕ ಗುಣಪಾಲ ಜೆ, ಡಿನ್ನೇಟಿ ಗ್ರೂಪ್ ನ ಕಾರ್ಯನಿರ್ವಹಣಾಧಿಕಾರಿ ಭಾತೀಶ ಕನಕಮಜಲು, ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯರುಸವಾದ್ ಸುಳ್ಯ, ಬುಶ್ರಾ ಎಜುಕೇಶನ್ ಟ್ರಸ್ಟ್ ನಿರ್ದೇಶಕರು ಕಲಂದರ್ ಶಾಫಿ ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮ : ಶಾಲಾ ವಿದ್ಯಾರ್ಥಿಗಳಿಂದ ಸಂಜೆ ಗಂಟೆ 5 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಮುಂದುವರಿಯಲಿದೆ ಎಂದು ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯಗುರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























