ಸವಣೂರು: ಯುವಕನೋರ್ವ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದಿಂದ ವರದಿಯಾಗಿದೆ.
ಸವಣೂರು ಗ್ರಾಮದ ಅಗರಿ ನಿವಾಸಿ ರಾಮಚಂದ್ರ ಎಂಬವರ ಮಗ ಮೇಘರಾಜ್ ಮೃತಪಟ್ಟವರು. ಮೇಘರಾಜ್ ಅವರು ಡಿ.25ರಂದು ಮನೆಯಲ್ಲಿ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದರು.
ಅವರನ್ನು ಚಿಕಿತ್ಸೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಅಲ್ಲಿನ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಮೇಲ್ದರ್ಜೆಯ ಆಸ್ಪತ್ರೆಗೆ ಸೇರಿಸುವಂತೆ ಸೂಚಿಸಿದ್ದರು. ಆದರೆ ಮೇಘರಾಜರವರು ಆಸ್ಪತ್ರೆಗೆ ಹೋಗದೇ ವಾಪಾಸ್ ಮನೆಗೆ ಬಂದಿದ್ದು,ಡಿ.28ರಂದು ಮನೆಯಲ್ಲಿ ವಿಪರೀತ ವಾಂತಿ ಮಾಡಿ ಅಸ್ವಸ್ಥಗೊಂಡಾಗ ಪುತ್ತೂರಿನ ಆದರ್ಶ ಆಸ್ಪತ್ರೆಗೆ ಕರೆತರಲಾಗಿತ್ತು.
ಅಲ್ಲಿನ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದು ಮೇಲ್ದರ್ಜೆಯ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದು, ಬಳಿಕ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಈ ಕುರಿತು ಮೃತನ ತಂದೆ ರಾಮಚಂದ್ರ ಅವರು ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

























