ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬೀಡಿನಗದ್ದೆ ನಿವಾಸಿ ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಜ. 1 ರ ರಾತ್ರಿ ವರದಿಯಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಸುಕಿನ ವೇಳೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಉಚ್ಚಿಲದ ಅಂಬ್ಯೂಲೆನ್ಸ್ ಒಂದರಲ್ಲಿ ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲಾಗಿದ್ದು ಶವಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.
ಮೃತರು ತಂದೆ ಜನಾರ್ದನ, ತಾಯಿ, ಸಹೋದರ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

























