ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶ @ ಗಣೇಶ ಪೂಜಾರಿ (ವಾಸ: ಬಡಕೋಡಿ ಮನೆ, ಕೇಪು ಗ್ರಾಮ, ಬಂಟ್ವಾಳ ತಾಲೂಕು) ಎಂಬಾತನ ವಿರುದ್ಧ ಹಲ್ಲೆ, ದೊಂಬಿ, ಕೊಲೆ ಯತ್ನ, ಜೂಜು, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸೇರಿದಂತೆ ಒಟ್ಟು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
ಈ ಹಿನ್ನೆಲೆ ವಿಟ್ಲ ಪೊಲೀಸ್ ಠಾಣಾಧಿಕಾರಿಗಳ ವರದಿಯನ್ನು ಆಧರಿಸಿ, ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯಿಂದ ಹಾಸನ ಜಿಲ್ಲೆಯ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶ ಹೊರಡಿಸಿದ್ದಾರೆ.
ಸಹಾಯಕ ಆಯುಕ್ತರ ಆದೇಶದಂತೆ ಆರೋಪಿಯನ್ನು ಸುರಕ್ಷಿತವಾಗಿ ಹಾಸನ ಜಿಲ್ಲೆಯ ಆಲೂರು ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

























