ಪುತ್ತೂರು : ಪಾಣಾಜೆ ಗ್ರಾಮದ ಭರಣ್ಯ ನಿವಾಸಿ ಶ್ರೀನಿವಾಸರವರ ಪತ್ನಿ, ಪಾಣಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಬಿಕಾ (35 ವ.)ರವರು ಆಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರು ಪಾಣಾಜೆ ಆರೋಗ್ಯ ಕೇಂದ್ರ ಸಲಹಾ ಸಮಿತಿ ಸದಸ್ಯೆಯಾಗಿ, ಸೂರಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಪತಿ ಶ್ರೀನಿವಾಸ ಭರಣ್ಯ ಹಾಗೂ ಓರ್ವ ಪುತ್ರ, ಓರ್ವ ಪುತ್ರಿಯನ್ನು ಆಗಲಿದ್ದಾರೆ.


























