ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ಹದಿನೈದರ ಹರೆಯದ ಬಾಲಕಿಯ ಕೈ ಹಿಡಿದು ಎಳೆದು ಮಾನಭಂಗ ಮಾಡಲು ಯತ್ನಿಸಿರುವುದಾಗಿ ಚಂದ್ರಶೇಖರ್ ಎಂಬವರ ವಿರುದ್ದ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.
ಘಟನೆಗೆ ಸಂಬಂಧಿಸಿ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ನೇಮೋತ್ಸವಕ್ಕೆ ಹೋಗಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


























