ಬಂಟ್ವಾಳ: ದಿನಾಂಕ 07-01-2026 ರಂದು ಸದಾನಂದ ಎಂಬವರು ತಮ್ಮ ಮೊಬೈಲ್‌ನ ಫೇಸ್‌ಬುಕ್ ಖಾತೆಯನ್ನು ಪರಿಶೀಲಿಸಿದ ವೇಳೆ Billava Sandesh ಎಂಬ ಫೇಸ್‌ಬುಕ್ ಖಾತೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಅವರ ಫೋಟೋವನ್ನು ಅವಹೇಳನಕಾರಿ ಬರಹಗಳೊಂದಿಗೆ ಪ್ರಕಟಿಸಿ, ಸುಳ್ಳು ಅಪಪ್ರಚಾರ ನಡೆಸಲಾಗುತ್ತಿದೆ ಎಂಬುದು ಬೆಳಕಿಗೆ ಬಂದಿದೆ.
ಈ ಸಂಬಂಧ ಸದಾನಂದ ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್ ಮೂಲಕ ಶಾಸಕಿ ಅವರ ಮಾನಹಾನಿ ಮಾಡುವ ಉದ್ದೇಶದಿಂದ ಈ ರೀತಿಯ ಪೋಸ್ಟ್‌ಗಳನ್ನು ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣದ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆ ಆರಂಭಿಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

























