ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ನಾಲ್ಕು ದನಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ದಿನಾಂಕ 18-11-2025 ರಂದು ಗಣೇಶ ರೈ ಹಾಗೂ ನಾರಾಯಣ ನಾಯ್ಕ ಅವರಿಗೆ ಸೇರಿದ ಒಟ್ಟು ನಾಲ್ಕು ದನಗಳು ಕಳ್ಳತನವಾಗಿರುವ ಬಗ್ಗೆ ಗಣೇಶ ರೈ ಅವರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.169/2025ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸರು, ದಿನಾಂಕ 08-01-2026 ರಂದು ಕಳ್ಳತನದ ಆರೋಪಿಯಾದ ಝುಲ್ಫಾನ್ ಮಾಲಿಕ್ (ಪ್ರಾಯ 30 ವರ್ಷ), ಕೋಡಿ, ಉಳ್ಳಾಲ ಗ್ರಾಮ ಹಾಗೂ ತಾಲೂಕು, ಮಂಗಳೂರು ಜಿಲ್ಲೆ ಎಂಬುವರನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


























