ನೆಲ್ಯಾಡಿ: ನಾಲ್ಕು ದಿನಗಳ ಹಿಂದೆ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮಾನಭಂಗ ಮಾಡಲು ಯತ್ನಿಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಾಲಕಿ ಕುಟುಂಬದವರೊಂದಿಗೆ ಜ.3ರಂದು ರಾತ್ರಿ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ನಡೆದ ನೇಮೋತ್ಸವಕ್ಕೆ ತೆರಳಿದ್ದು, ಅಲ್ಲಿ ನೇಮೋತ್ಸವವನ್ನು ವೀಕ್ಷಿಸುತ್ತಿದ್ದರು.
ಜ.4ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸ್ಥಳೀಯ ನಿವಾಸಿ ಚಂದ್ರಶೇಖರ ಕಟ್ಟೆಮಜಲು ಎಂಬಾತ ಬಾಲಕಿಯ ಕೈ ಹಿಡಿದು ಎಳೆದಾಡಿ ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಬಾಲಕಿಯ ತಂದೆ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.


























