Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!

January 15, 2026
in ಕ್ರೈಮ್, ಬೆಂಗಳೂರು
0
ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಪ್ರೀತಿಗೆ ಮನಸೋತು ಹೆಣವಾದಳು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಳ್ಳಾರಿ: ಆಕೆ ಮೂರು ಮಕ್ಕಳ ತಾಯಿ ಕಳೆದ 8 ವರ್ಷಗಳಿಂದ ಗಂಡನಿಂದ ದೂರವಾಗಿದ್ದರು. ರೈಲ್ವೆ ಸ್ಟೇಷನ್​​ನಲ್ಲಿ ಸ್ಟಾಲ್‌‌ವೊಂದರಲ್ಲಿ ಕೆಲಸ ಮಾಡಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದರು. ತಾವಾಯ್ತು ತಮ್ಮ ಕುಟುಂಬವಾಯ್ತು ಅಂತಾ ಇದ್ದವರಿಗೆ ಯುವಕನೊಬ್ಬನ ಪರಿಚಯವಾಗಿದೆ. ಪರಿಚಯ ಸಲುಗೆಗೆ ತಿರುಗಿ ಯಾರಿಗೂ ಗೊತ್ತಾಗದ ಹಾಗೆ ನಾಲ್ಕು ತಿಂಗಳ ಹಿಂದೆ ಮದುವೆ ಆಗಿದ್ದರು. ಆದರೆ ಅವರಿಬ್ಬರ ನಡುವೆ ಅದೇನಾಯ್ತು ಏನೋ, ಕತ್ತು ಕೊಯ್ದು ಭೀಕರ ಕೊಲೆ ಮಾಡಿದ್ದ.

Advertisement
Advertisement
Advertisement

ಉಮಾ (32) ಅವರಿಗೆ 12 ವರ್ಷಗಳ ಹಿಂದೆ ಮದುವೆಯಾಗಿತ್ತು. ಪಕ್ಕದ ರಾಜ್ಯ ಆಂಧ್ರದ ಪಾತಿಕೊಂಡ ಗ್ರಾಮದ ಸಂಬಂಧಿಕರೊಬ್ಬರಿಗೆ ಮದುವೆ ಮಾಡಿಕೊಡಲಾಗಿತ್ತು. ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು. ಮೂರು ಗಂಡು ಮಕ್ಕಳಿಗೆ ಜನ್ಮ ಕೂಡ ನೀಡಿದ್ದರು. ಆದರೆ ದಿನ ಕಳೆದಂತೆ ಗಂಡ-ಹೆಂಡತಿ ನಡುವೆ ಕಲಹ ಶುರುವಾಗಿದ್ದು, ಬಳಿಕ ಇಬ್ಬರು ದೂರುವಾಗಿದ್ದಾರೆ.

ಗಂಡನಿಂದ ದೂರವಾಗಿದ್ದ ಉಮಾ ತಮ್ಮ ತವರೂರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಚಾಪಲಗಡ್ಡದಲ್ಲಿ ವಾಸವಾಗಿದ್ದರು. ಮೂರು ಮಕ್ಕಳನ್ನ ಕಟ್ಟಿಕೊಂಡು ಜೀವನ ನಡೆಸುವುದು ಉಮಾಗೆ ಕಷ್ಟವಾಗಿತ್ತು. ಹೀಗಾಗಿ ಹೊಸಪೇಟೆ ನಗರದ ರೈಲ್ವೆ ಸ್ಟೇಷನ್‌ನಲ್ಲಿ ಸ್ಟಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬರುವ ಸಂಬಳದಲ್ಲಿ ಹೇಗೋ ಜೀವನ ಸಾಗಿಸುತ್ತಿದ್ದರು. ಇನ್ನು ಉಮಾಗೆ ಮೂವರು ಗಂಡು ಮಕ್ಕಳು. ಅದರಲ್ಲಿ ಹಿರಿಯ ಮಗ ತನ್ನ ತಂದೆಯೊಂದಿಗೆ ವಾಸವಿದ್ದರೆ, ಇಬ್ಬರನ್ನು ಉಮಾ ಅವರೇ ನೋಡಿಕೊಳ್ಳುತ್ತಿದ್ದರು. ಮಕ್ಕಳ ವಿದ್ಯಾಭ್ಯಾಸ ತಂದೆ-ತಾಯಿಯನ್ನ ನೋಡಿಕೊಳ್ಳುವುದು ಅವರ ಜವಾಬ್ದಾರಿಯಾಗಿತ್ತು.

Advertisement

ನಿತ್ಯ ಕೆಲಸಕ್ಕೆ ಹೋಗುತ್ತಿದ್ದ ಉಮಾರಿಗೆ ಅಂದು ವಸ್ತುಪ್ರದರ್ಶನದಲ್ಲಿ ಕೆಲಸ ಮಾಡುತ್ತಿದ್ದ ಖಾಜಾ ಎಂಬ ಯುವಕನ ಪರಿಚಯವಾಗಿದೆ. ಪರಿಚಯದ ನಂತರ ಆತ ದಿನವು ರೈಲ್ವೆ ಸ್ಟೇಷನ್‌ಗೆ ಬರೋದು, ಉಮಾ ಕೆಲಸ ಮಾಡುತ್ತಿದ್ದ ಸ್ಟಾಲ್ ಹತ್ತಿರ ನಿಲ್ಲುವುದು, ಅವರನ್ನು ಮಾತನಾಡಿಸುವ ಪ್ರಯತ್ನ ಮಾಡುವುದು ಹೀಗೆ ಕೆಲ ತಿಂಗಳು ನಡೆದಿದೆ. ಆದಾದ ಬಳಿಕ ಇಬ್ಬರು ಫೋನ್​ ನಂಬರ್ ಬದಲಾಯಿಸಿಕೊಂಡಿದ್ದಾರೆ.​

ಪೋನ್ ನಂಬರ್ ಎಕ್ಸ್​ಚೇಂಜ್ ಆಗುತ್ತಿದ್ದಂತೆ ಇಬ್ಬರು ವಾಟ್ಸಾಪ್ ಚಾಟಿಂಗ್, ಫೋನ್​ ಕಾಲಿಂಗ್ ಜೋರಿರುತ್ತೆ. ಉಮಾ ಖಾಜಾನ ಜೊತೆಗೆ ಮಾತನಾಡುವ ವಿಷಯ ಅವರ ಮನೆಯಲ್ಲೂ ಗೊತ್ತಿರುತ್ತದೆ. ಉಮಾಳ ಸಹೋದರಿ ಯಾಕೆ ಇಷ್ಟೊಂದು ಫೋನ್​​ನಲ್ಲಿ ಮಾತಾಡೋದು, ಯಾರದು ಎಂದು ಕೇಳಿದ್ದಾರೆ. ಆಗ ಉಮಾ ಖಾಜಾ ಅಂತಾ, ಅವನು ನನ್ನ ಫ್ರೆಂಡ್ ಅಂತ ಹೇಳಿದ್ದಾರೆ. ಮೂರು ಮಕ್ಕಳ ತಾಯಿಯಾಗಿದ್ದ ಉಮಾಳಿಗೆ ಮುಸ್ಲಿಂ ಯುವಕ ಖಾಜಾ ಮೇಲೆ ಲವ್ ಆಗಿಯೇ ಬಿಟ್ಟಿದೆ. ಇತ್ತ ಖಾಜಾ ಕೂಡ ಲವ್​ನಲ್ಲಿ ಬಿದ್ದಿದ್ದ. ಇಬ್ಬರ ಪ್ರೇಮ ಪ್ರಣಯ ಶುರುವಾಗಿದೆ.

ಉಮಾ ಯಾವಾಗ ಖಾಜಾನ ಪ್ರೀತಿಯಲ್ಲಿ ಬಿದ್ದರೋ, ಆಗ ಅವರು ಮನೆ-ಮಕ್ಕಳು ಎಲ್ಲವನ್ನ ಮರೆತಿದ್ದಾರೆ. ಮೂರು ಹೊತ್ತು ಖಾಜಾನ ಜೊತೆಗೆ ಮಾತು, ಚಾಟಿಂಗ್, ಡೇಟಿಂಗ್ ಜೋರಾಗಿತ್ತು. ಪರಿಚಯವಾಗಿ 8 ತಿಂಗಳ ಕಳೆದಿತ್ತು. ಅದರಲ್ಲಿ ಮನೆಯವರಿಗೆ ಹೇಳದೇನೆ ಕಳೆದ ನಾಲ್ಕು ತಿಂಗಳ ಹಿಂದೆ ಇಬ್ಬರು ಗುಪ್ತವಾಗಿ ಮದುವೆ ಕೂಡ ಆಗಿದ್ದರಂತೆ. ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು. ಆದರೆ ಹಣದ ವಿಚಾರ ಇಬ್ಬರ ನಡುವಿನ ಮನಸ್ತಾಪಕ್ಕೆ ಕಾರಣವಾಗಿದೆ. ಇಬ್ಬರ ನಡುವೆ ಜಗಳ ಆರಂಭವಾಗಿದೆ. ಜೊತೆಗೆ ಖಾಜಾನಿಗೆ ಉಮಾಳ ಸೌಂದರ್ಯ, ಆಕೆಯ ಮಾತು ತೆಲೆಕೆಡಿಸಿತ್ತು. ಬರುಬರುತ್ತ ಆಕೆಯ ಮೇಲೆ ಅನುಮಾನ ಪಡೋದಕ್ಕೆ ಶುರು ಮಾಡಿದ್ದ. ಉಮಾಳ ಫೋನ್​ ಬಿಜಿ ಬಂದ್ರೆ ಸಾಕು ಜೋರು ಗಲಾಟೆ ಮಡುತ್ತಿದ್ದನಂತೆ. ಉಮಾರ ಮನೆಗೆ ಯಾವತ್ತು ಖಾಜಾ ಬರುತ್ತಿರಲಿಲ್ಲ, ಬದಲಿಗೆ ಇಬ್ಬರು ಹೊರಗಡೆ ಭೇಟಿ ಮಾಡುತ್ತಿದ್ದರಂತೆ.

ಜನವರಿ 6ರಂದು ಅನುಮಾನ, ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ. ಗಲಾಟೆಯಾದ ಬಳಿಕ ಉಮಾಳ ಮನೆ ಹತ್ತಿರಕ್ಕೆ ಖಾಜಾ ಬಂದಿದ್ದಾನೆ. ಮನೆ ಹತ್ತಿರ ಬರುತ್ತಿದ್ದಂತೆ ಉಮಾ ಅವರ ಮನೆ ಪಕ್ಕದ ಮನೆಯ ಮಹಡಿಗೆ ಹೋಗಿದ್ದಾರೆ. ಆಗ ಸಮಯ ಬೆಳಗಿನ ಜಾವ 4.30ರ ಸುಮಾರು, ಇಬ್ಬರು ಮಹಡಿ ಮೇಲೆ ಮಾತನಾಡುತ್ತಿದ್ದರು. ಸಿಟ್ಟಿನಲ್ಲಿದ್ದ ಖಾಜಾ ಕೊಲೆ ಮಾಡಲೇಬೇಕು ಅಂತಾ ಸಂಚು ಹಾಕಿ, ಹರಿತವಾದ ಚಾಕು ತಂದಿದ್ದ. ಮುಖಕ್ಕೆ ಟವೆಲ್ ಹಾಕಿ ಕೋಳಿ ಕುತ್ತಿಗೆ ಕೊಯ್ಯುವ ಹಾಗೆ ಉಮಾರ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದ. ಇತ್ತ ರಕ್ತದ ಮಡುವಿನಲ್ಲಿ ಬಿದ್ದು ಉಮಾ ಸ್ಥಳದಲ್ಲೇ ಮೃತಪಟ್ಟಿದ್ದರು.

ಬೆಳಗಿನ ಜಾವ 4:30ಕ್ಕೆ ಮನೆಯಿಂದ ಆಚೆ ಹೋದವಳು ವಾಪಾಸ್ ಮನೆಗೆ ಬಂದಿಲ್ಲ. ಇತ್ತ ಗಾಬರಿಯಾಗಿದ್ದ ಮನೆಮಂದಿ ಉಮಾಳ ಹುಡುಕಾಡಿದ್ದಾರೆ. ಸಂಬಂಧಿಕರಿಗೆ, ಸ್ನೇಹಿತರಗೆ ಫೋನ್​ ಮಾಡಿ ವಿಚಾರಿಸಿದ್ದಾರೆ. ಆದರೆ ಯಾವುದು ಪ್ರಯೋಜವಾಗಿಲ್ಲ. ಇತ್ತ ಮನೆ ಪಕ್ಕದಲ್ಲಿ ಬೆಕ್ಕುಗಳ ಕಾದಾಟ ಮಾಡುತ್ತಿದ್ದವು. ಬೆಕ್ಕುಗಳು ಯಾಕಿಷ್ಟು ಕಾದಾಡುತ್ತಿವೆ. ಅಂತಾ ಮನೆ ಮಹಡಿ ನೋಡಲು ಹೋಗಿದ್ದ ಪಕ್ಕದ ಮನೆಯವರಿಗೆ ಉಮಾಳ ಶವ ಕಂಡಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯ ಮೃತದೇಹ ಕಂಡು ಆತಂಕಗೊಂಡಿದ್ದಾರೆ. ತಕ್ಷಣ ಚಿತ್ತವಾಡ್ಗಿ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಹರಿತವಾದ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದು ಬೆಳೆಕಿಗೆ ಬಂದಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದರು.

ಇತ್ತ ಕೊಲೆ ಮಾಡಿದ್ದ ಖಾಜಾ ಹೊಸಪೇಟೆ ನಗರದಲ್ಲಿ ತಲೆ ಮರೆಸಿಕೊಂಡಿದ್ದ. ಕೊಲೆ ಸ್ಥಳಕ್ಕೆ ವಿಜಯನಗರ ಎಸ್ಪಿ ಜಾಹ್ನವಿ ಭೇಟಿ ನೀಡಿ ಆರೋಪಿ ಪತ್ತೆಗೆ ತಂಡ ಸಿದ್ಧಮಾಡಿದ್ದರು. ಮೃತ ಉಮಾಳ ಫೋನ್​ ಚೆಕ್ ಮಾಡಿ ಆಕೆಯ ಕೊನೆಯ ಕಾಲ್‌ ನಂಬರ್ ತೆಗೆದು ಟವರ್ ಟ್ರೇಸ್​ ಮಾಡಿದ್ದು, ಪ್ರಕರಣ ದಾಖಲಾದ ಕೇವಲ ನಾಲ್ಕು ಗಂಟೆಯಲ್ಲಿ ಆರೋಪಿ ಖಾಜಾ ಪತ್ತೆ ಮಾಡಿದ ಪೊಲೀಸರು, ಆತನನ್ನು ಕಂಬಿ ಹಿಂದೆ ನಿಲ್ಲಿಸಿದ್ದಾರೆ. ಇತ್ತ ಉಮಾರನ್ನ ಕಳೆದುಕೊಂಡ ಇಡೀ ಕುಟುಂಬ ಅನಾಥವಾಗಿದೆ. ಮೊದಲೇ ತಂದೆಯಿಂದ ದೂರವಿದ್ದ ಮಕ್ಕಳು ಇದೀಗ ತಾಯಿ ಇಲ್ಲದೆ ತಬ್ಬಲಿಗಳಾಗಿವೆ.

Previous Post

ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ..!!

Next Post

ವಕ್ಫ್ ನಿಂದ  ಮೂರು  ಮಸೀದಿಗಳಿಗೆ  ಒಟ್ಟು 50ಲಕ್ಷ  ಅನುದಾನ  ಬಿಡುಗಡೆ : ಶಾಸಕ ಅಶೋಕ್ ರೈ..!!

OtherNews

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಕ್ರೈಮ್

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!
Featured

ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

June 13, 2026
ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!
ಕ್ರೈಮ್

ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

June 13, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ : ಕೃಷ್ಣಜೆ.ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆದಾರರಾಗಿ ವಕೀಲೆ ಸುಶೀಲಾ ನೇಮಕ..!!!
Featured

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ : ಕೃಷ್ಣಜೆ.ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆದಾರರಾಗಿ ವಕೀಲೆ ಸುಶೀಲಾ ನೇಮಕ..!!!

June 13, 2026
ಪುತ್ತೂರು: ಮಹಿಳಾ ಠಾಣಾ ಮುಂಭಾಗದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಕಟ್ಟಡ ತೆರವು…!!!
Featured

ಪುತ್ತೂರು: ಮಹಿಳಾ ಠಾಣಾ ಮುಂಭಾಗದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಕಟ್ಟಡ ತೆರವು…!!!

June 13, 2026
ಮಂಗಳೂರಿನಲ್ಲಿ ವೇಶ್ಯಾವಾಟಿಕೆ: ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರ ರಕ್ಷಣೆ: ಮೂವರು ವಶಕ್ಕೆ
ಕ್ರೈಮ್

ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನ; ವಿವಾಹಿತ ವ್ಯಕ್ತಿ ವಿರುದ್ಧ ಪ್ರಕರಣ..!!!

June 13, 2026

Leave a Reply Cancel reply

Your email address will not be published. Required fields are marked *

Recent News

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.