ಪುತ್ತೂರು: ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಟ್ಟೆಗೆ ಬೆಂಕಿ ತಗುಲಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಒಳಮೊಗ್ರು ಗ್ರಾಮದ ಮುರುವ ನಿವಾಸಿ ಐಸಮ್ಮ (75ವ.)ರವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅವರು ಮನೆಯಲ್ಲಿ ಆಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಬಟ್ಟೆಗೆ ಬೆಂಕಿ ಹತ್ತಿಕೊಂಡಿತ್ತು.ತಕ್ಷಣ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಜ.18ರಂದು ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೃತರ ಪುತ್ರಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

























