ಪುತ್ತೂರು, ಜನವರಿ 22:
ದಿನಾಂಕ 22.01.2026 ರಂದು ಬೆಳಿಗ್ಗೆ ಪುತ್ತೂರು ಕಾವು ಮಾಡ್ನೂರು ಗ್ರಾಮದ ನಿವಾಸಿ ರವಿ ಎಂಬವರ ವಿರುದ್ಧ ಅವರ ಪತ್ನಿಯವರು ವೈವಾಹಿಕ ಮನಸ್ತಾಪದ ಹಿನ್ನೆಲೆಯಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದರು.
ಈ ವಿಚಾರದ ಮಾಹಿತಿ ತಿಳಿದ ರವಿರವರು ಮಾನ್ಯ ಪುತ್ತೂರು ನ್ಯಾಯಾಲಯದ ಸಂಕೀರ್ಣಕ್ಕೆ ತೆರಳಿ, ನ್ಯಾಯಾಲಯದ ಒಳಗೆ ಪ್ರವೇಶಿಸಿದ ಬಳಿಕ ಯಾವುದೋ ವಿಷಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ತಕ್ಷಣವೇ ಅವರನ್ನು ಚಿಕಿತ್ಸೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿದೆ.
ಘಟನೆ ಮಾನ್ಯ ನ್ಯಾಯಾಲಯದ ಸಂಕೀರ್ಣದ ಒಳಗೇ ನಡೆದಿರುವುದರಿಂದ, ಮಾನ್ಯ ನ್ಯಾಯಾಲಯದ ನ್ಯಾಯಾಧೀಶರು ಸ್ವಯಂ ದೂರು ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುತ್ತಾರೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.


























