ವಿಟ್ಲ : ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಕಟ್ಟಡ ಕಾರ್ಮಿಕರಿಗೆ,ಆಟೋ ಟ್ಯಾಕ್ಸಿ ಚಾಲಕರಿಗೆ ಕೋವಿಡ್ ಲಸಿಕೆಯನ್ನು ಜೂ.23 ರಂದು ನೀಡಲಾಯಿತು.
ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ವಿಶ್ವೇಶ್ವರ ಭಟ್ ಇವರ ನೇತೃತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರ ಪ್ರಯತ್ನದೊಂದಿಗೆ ಇಂದು ಸುಮಾರು 300ಕ್ಕೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯಶಸ್ವಿನಿ ಶಾಸ್ತ್ರಿ ನೆಕ್ಕರೆ, ಉಪಾಧ್ಯಕ್ಷರಾದ ರಾಘವ ಮಣಿಯಾಣಿ ಸಾರಡ್ಕ, ಕೇಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಸದಸ್ಯರುಗಳು, ಇವರೊಂದಿಗೆ ಕೇಪು ಗ್ರಾಮ ಪಂಚಾಯತ್‌ನ ಸಿಬ್ಬಂದಿ ವರ್ಗ ಹಾಗೂ ಆಶಾಕಾರ್ಯಕರ್ತೆಯರು ಸಾಥ್ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯಶಸ್ವಿನಿ ಶಾಸ್ತ್ರಿ ನೆಕ್ಕರೆ, ಉಪಾಧ್ಯಕ್ಷರಾದ ರಾಘವ ಮಣಿಯಾಣಿ ಸಾರಡ್ಕ,ವೈದ್ಯಾಧಿಕಾರಿಗಳು, ಪಿಡಿಓ, ಪಂಚಾಯತ್ ಸದಸ್ಯರು ಗಳಾದ ಪುರುಷೋತ್ತಮ ಕಲ್ಲಂಗಳ, ಜಗಜೀವನ್ ರಾಮ್ ಶೆಟ್ಟಿ, ಜಯಶೀಲ ಕಾಯರ್ತ್ತಡ್ಕ, ಅಬ್ದುಲ್ ಕರೀಂ, ಗ್ರಾಮ ಪಂಚಾಯತ್ ಕಚೇರಿಯ ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.