ಪುತ್ತೂರು: (ಜ.25)
ಪ್ರಗತಿ ಯುವಕ ಮಂಡಲ (ರಿ.), ರೋಟರಿಪುರ, ಪುತ್ತೂರು ಇದರ ಆಶ್ರಯದಲ್ಲಿ 43ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಕಲ್ಪೋಕ್ತ ಪೂಜೆ ಜ.25ರಂದು ಭಕ್ತಿಭಾವದಿಂದ ನಡೆಯಲಿದೆ.
ಈ ಪೂಜಾ ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದೆ. ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳು ಎಲ್ಲರೂ ಈ ಪುಣ್ಯಕಾರ್ಯದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದ್ದಾರೆ.

























