ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಗುಣಾಪಾಲ ಜೆ ರವರು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ಪತ್ತೆ ಮಾಡಿ ಆರೋಪಿಗಳಾದ
- ಮೊಹಮ್ಮದ್ ಹರ್ಷದ್ (33), ವಾಸ: ಪಾಣಾಜೆ ಗ್ರಾಮ ಪುತ್ತೂರು
- ಮಹಮ್ಮದ್ ಆರೀಶ್ (31), ವಾಸ: ಇರ್ದೆ ಗ್ರಾಮ, ಬೆಟ್ಟಂಪಾಡಿ ಅಂಚೆ, ಪುತ್ತೂರು
- ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46), ವಾಸ:ಬೆಟ್ಟಂಪಾಡಿ ಗ್ರಾಮ, ಪುತ್ತೂರು ಎಂಬವರುಗಳನ್ನು
ಹಾಗೂ ಆರೋಪಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ನೀಡುತ್ತಿದ್ದ
4.ಬಂಟ್ವಾಳ ಸಜೀಪ ನಡು ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಮಹಮ್ಮದ್ ಮುಸ್ತಾಫ (46) ಎಂಬವರನ್ನು ದಸ್ತಗಿರಿ ಮಾಡಿರುತ್ತಾರೆ.
ಆರೋಪಿಗಳಿಂದ ಅಂದಾಜು ರೂ. 50,000/- ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು ರೂ ಆರು ಲಕ್ಷ ಮೌಲ್ಯದ 02 ಕಾರುಗಳನ್ನು ವಶಕ್ಕೆ ಪಡೆದಿರುತ್ತಾರೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ 6,50,000/-ರೂ ಗಳಾಗಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಿನಾಂಕ: 24.01.2026 ರಂದು ಅ.ಕ್ರ ನಂ: 13-2026, ಕಲಂ : – 8(c)21(b) NDPS Act.25(1B)(B) Arms Act ರಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಗುಣಾಪಾಲ ಜೆ ರವರು ನೇತೃತ್ವದ ತನಿಖಾ ತಂಡದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕರಾದ ಸುಶ್ಮಾ ಭಂಡಾರಿ ಹಾಗೂ ಸಿಬ್ಬಂಧಿಗಳಾದ ಮುರುಗೇಶ್ ಪರಮೇಶ್ವರ, ಸತೀಶ್, ಸುಬ್ರಹ್ಮಣ್ಯ, ಹರೀಶ್, ನಾಗೇಶ್, ಭವಿತ್ ರೈ ವಿನೋದ್, ನಾಗರಾಜ್, ಕಾರ್ತಿಕ್ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ್ , ಪ್ರಶಾಂತ ಎಂ, ಪ್ರವೀಣ್ ರೈ, ಪ್ರಶಾಂತ್ ರೈ, ಹರ್ಷಿತ್, ಸಂಪತ್ ರವರು ಹಾಗೂ ಸೋಕೋ ತಂಡದವರು ಭಾಗವಹಿಸಿರುತ್ತಾರೆ.

























