ಪುತ್ತೂರು: ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್, ಪಣಂಬೂರು–ಮಂಗಳೂರು, ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ–ಮಂಗಳೂರು ಹಾಗೂ ತ್ರಿಶೂಲ್ ಫ್ರೆಂಡ್ಸ್ (ರಿ.) ಪುತ್ತೂರು ಇವರ ಸಹಯೋಗದಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರವನ್ನು ಫೆಬ್ರವರಿ 15, 2026ರ ಭಾನುವಾರ ಏರ್ಪಡಿಸಲಾಗಿದೆ.
ಶಿಬಿರವು ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಲಯನ್ಸ್ ಸೇವಾ ಮಂದಿರದಲ್ಲಿ ಬೆಳಿಗ್ಗೆ 9.00ರಿಂದ ಮಧ್ಯಾಹ್ನ 12.30ರವರೆಗೆ ನಡೆಯಲಿದೆ.
ಶಿಬಿರದಲ್ಲಿ ನೇತ್ರ ತಜ್ಞರಿಂದ ಕಣ್ಣಿನ ಪರೀಕ್ಷೆ ಹಾಗೂ ಸಲಹೆ ನೀಡಲಾಗುತ್ತದೆ. ತಪಾಸಣೆಯಲ್ಲಿ ಶಸ್ತ್ರಚಿಕಿತ್ಸೆ ಅಗತ್ಯವೆಂದು ಕಂಡುಬಂದವರಿಗೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ ಇಲ್ಲಿ ಉಚಿತ ಶಸ್ತ್ರಚಿಕಿತ್ಸೆ ವ್ಯವಸ್ಥೆ ಮಾಡಲಾಗುತ್ತದೆ. ಜೊತೆಗೆ ಸಕ್ಕರೆ ಕಾಯಿಲೆಗೆ ರಕ್ತ ಪರೀಕ್ಷೆ, ರಕ್ತದ ಒತ್ತಡ (ಬಿ.ಪಿ.) ಪರೀಕ್ಷೆ, ಉಚಿತ ಕನ್ನಡಕ ವಿತರಣೆ ಹಾಗೂ ಚರ್ಮರೋಗ ತಪಾಸಣೆ ಮತ್ತು ಚಿಕಿತ್ಸೆ ಸೌಲಭ್ಯಗಳೂ ಲಭ್ಯವಿರುತ್ತವೆ.
ಆಸಕ್ತರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು: 8746844989, 9071358521.


























