Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!

February 13, 2026
in ಕ್ರೈಮ್
0
ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ತುಮಕೂರು: ತುಮಕೂರು ನಗರದ ಬಂಡೇಪಾಳ್ಯ ಬಳಿಯ ಶ್ರೀನಗರ ನಿವಾಸಿ ಪುಷ್ಪಲತಾ ಸ್ವಂತ ಸೂರು ಕಟ್ಟಿಕೊಂಡು ಮಗಳು ಸುಚಿತ್ರಾ ಹಾಗೂ ಆಳಿಯನ ಜೊತೆ ವಾಸವಿದ್ದರು. ಕಳೆದ ಕೆಲ ದಿನಗಳಿಂದ ಮಂಡಿನೋವು ಎಂದು ಹಾಸಿಗೆ ಹಿಡಿದಿದ್ದರು. ಫೆಬ್ರವರಿ 11 ರಂದು ರಾತ್ರಿ ನಿಗೂಢವಾಗಿ ಸಾವನಪ್ಪಿದ್ದಾರೆ. ಆಕೆಯ ಜೊತೆಗೆ ವಾಸವಿದ್ದ ಮಗಳು ಹೃದಯಾಘಾತ ಎಂದು ಅಂತ್ಯಕ್ರಿಯೆ ಮಾಡಲು ಮುಂದಾಗಿದ್ದಳು. ಆದರೆ, ಅದೇ ಸಮಯಕ್ಕೆ, ಕೆಲವು ಮಂದಿ ಸ್ಥಳೀಯರು ಅನುಮಾನದಿಂದ ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ಸಾವಿನ ಹಿಂದಿನ ಅಸಲಿ ಸತ್ಯ ಬಯಲು ಮಾಡಿದ್ದಾರೆ. ಪುಷ್ಪಲತಾ ಹೃದಯಾಘಾತದಿಂದ ಸಾವನ್ನಪ್ಪಿಲ್ಲ, ಕೊಲೆಯಾಗಿದ್ದಾರೆ ಎಂಬುದನ್ನು ಬಯಲುಮಾಡಿದ್ದಾರೆ. ಪುಷ್ಪಲತಾರನ್ನು ಕೊಲೆ ಮಾಡಿದ್ದು, ಮತ್ಯಾರೂ ಅಲ್ಲ. ಆಕೆಯ ಮಗಳೇ!

ಸುಚಿತ್ರಾ ಹಾಗೂ ಆಕೆಯ ಪತಿ ಸುರೇಶ್ ಸಹ ಪುಷ್ಪಲತಾ ಮನೆಯಲ್ಲಿಯೇ ವಾಸವಿದ್ದರು. ಸುರೇಶ ಕೊರಿಯರ್ ಕಂಪನಿಯಲ್ಲಿ ಕೆಲಸ ಮಾಡುತಿದ್ದ. ಆತನ ದುಡಿಮೆಯಲ್ಲೇ ಜೀವನ ಸಾಗುತಿತ್ತು ಎನ್ನಲಾಗಿದೆ. ಒಂದು ವರ್ಷದ ಹಿಂದೆ ಇದ್ದಕಿದ್ದಂತೆ ಆರೋಗ್ಯ ಸಮಸ್ಯೆಗೆ ಒಳಗಾದ ಪುಷ್ಪಲತಾ ಗಂಡ ಬಾಬು ನಾಯಕ್ ಮೃತಪಟ್ಟಿದ್ದರು. ತಂದೆಯ ಮುದ್ದಿನ‌ ಮಗಳು ಸುಚಿತ್ರಾ, ಅವರನ್ನು ಕಳೆದುಕೊಂಡಿದ್ದ ದುಃಖದಲ್ಲಿದ್ದ ಜ್ಯೋತಿಷಿಯೊಬ್ಬರ ಭೇಟಿ ಮಾಡಿದ್ದಳು. ಈ ವೇಳೆ ಬಾಬು ಸಾವಿಗೆ ಆತನ ಪತ್ನಿಯೇ ಕಾರಣ. ಪುಷ್ಪಲತಾ ಮಾಟಮಂತ್ರ ಮಾಡಿಸಿದ್ದರು. ನಿನಗೂ ಅವರಿಂದ ಕಂಠಕ ಇದೆ ಎಂದು ಜ್ಯೋತಿಷಿ ಹೇಳಿದ್ದರು ಎನ್ನಲಾಗಿದೆ.

Advertisement

ಈ ಮಾತು ಕೇಳಿದ ಸುಚಿತ್ರಾ, ತನ್ನ ಪ್ರೀತಿಯ ತಂದೆಯನ್ನು ಕೊಂದಿದ್ದಾಳೆಂಬ ಅಲೋಚನೆ ಹಾಗೂ ತಾನೂ ಈಕೆಯಿಂದ ಸಾಯಬಹುದೆಂಬ ಆತಂಕದಲ್ಲಿ ಫೆಬ್ರವರಿ 11ರ ರಾತ್ರಿ ಊಟ ಮಾಡಿ ಮಲಗಿದ್ದ ತಾಯಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಸಾಯಿಸಿದ್ದಾಳೆ. ಈ ವೇಳೆ ಹಲ್ಲೆ ಸಹ ಮಾಡಿದ್ದಳು ಎನ್ನಲಾಗಿದ್ದು, ಮುಖದಲ್ಲಿ ರಕ್ತಕಲೆಗಳು ಕಾಣಿಸಿವೆ. ಈ ಎಲ್ಲಾ ವಿಚಾರ ಗೊತ್ತಿದ್ದ ಸುಚಿತ್ರಾ ಗಂಡ ಮೌನವಹಿಸಿದ್ದ. ಪೊಲೀಸರ ತನಿಖೆ ವೇಳೆ ಆತ ಸಹ ಪರೋಕ್ಷವಾಗಿ ಶಾಮೀಲಾಗಿರುವ ಅಂಶಗಳು ಕಂಡು ಬಂದಿವೆ. ಸದ್ಯ ಸುಚಿತ್ರಾ ಹಾಗೂ ಆಕೆಯ ಪತಿ ಸುರೇಶ್ ಅನ್ನು ಕ್ಯಾತಸಂದ್ರ ಪೊಲೀಸರು ಬಂಧಿಸಿದ್ದಾರೆ.

ಕೊಲೆ ಮಾಡಿರುವುದಾಗಿ ಕ್ಯಾತಸಂದ್ರ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿರುವ ಸುಚಿತ್ರಾ ಜ್ಯೋತಿಷಿ ಕಥೆ ಹೇಳಿದ್ದಾಳೆ. ಆದರೆ, ಅದರ ಜತೆಗೆ ಒಂದಷ್ಟು ಹಣದ ವಿಚಾರ ಸಹ ಕಾರಣ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇತ್ತೀಚಿಗೆ ಜಾಗ ಮಾರಿ ಬಂದ ಲಕ್ಷಾಂತರ ರೂ. ಹಣವನ್ನು ಪುಷ್ಪಲತಾ ತಾನೇ ಇಟ್ಟುಕೊಂಡಿದ್ದಳು ಎನ್ನಲಾಗಿದೆ. ಅದೇ ವಿಚಾರವಾಗಿ ಜಗಳ ನಡೆದು ಕೊಲೆ ಮಾಡಿರುವ‌ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.

ತಾನೇ ಕೊಂದು ಕಥೆ ಕಟ್ಟಿದ್ದ ಸುಚಿತ್ರಾ, ತಾವು ವಾಸವಿದ್ದ ಶ್ರೀನಗರದ ಮನೆಯಿಂದ ತುಮಕೂರು ತಾಲ್ಲೂಕಿನ ಅನುಪನಹಳ್ಳಿಯ ಸಂಬಂಧಿಕರ ಮನೆಗೆ ಬೆಳ್ಳಂಬೆಳಿಗ್ಗೆಯೇ ಶವ ತಂದಿದ್ದು, ಯಾರಿಗೂ ಗೊತ್ತಾಗದ ರೀತಿ ಎಲ್ಲರ ಸಮ್ಮುಖದಲ್ಲಿ ಅಂತ್ಯಕ್ರಿಯೆ ಮಾಡಲು ಮುಂದಾಗಿದ್ದಳು ಎಂಬುದೂ ವಿಚಾರಣೆ ವೇಳೆ ಗೊತ್ತಾಗಿದೆ. ಈ ವಿಚಾರ ತಿಳಿದ ಸಂಬಂಧಿಕರು ಆಘಾತಕ್ಕೊಳಗಾಗಿದ್ದಾರೆ.

ಇತ್ತೀಚೆಗೆ ಶ್ರೀನಗರದ ಬಳಿ ತಾಯಿ ಹಾಗೂ ಮಗಳ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಹೀಗಾಗಿ ಪುಷ್ಪಲತಾ ಸಾವಿನ ವಿಚಾರ ತಿಳಿದವರು ಮೊದಲು ಪೊಲೀಸರಿಗೆ ಮಾಹಿತಿ ನೀಡಿ ಬಳಿಕ ಶವ ಹೂಳುವ ಸಂದರ್ಭದಲ್ಲಿ ಗಲಾಟೆ ಮಾಡಿದ್ದರು ಎನ್ನಲಾಗಿದೆ. ಆ ಬಳಿಕ ಬಂದ ಪೊಲೀಸರು ನಡೆಸಿದ ವಿಚಾರಣೆ ವೇಳೆ ಕೊಲೆ ಸಂಗತಿ ಬಯಲಾಗಿದೆ. ಆದರೆ, ಜ್ಯೋತಿಷಿ ಹೇಳಿದ ಕಾರಣಕ್ಕೆ ಕೊಲೆಯಾಯ್ತಾ‌ ಅಥವಾ ಹಣಕ್ಕಾಗಿ ಹತ್ಯೆಯಾಯಿತಾ ಎಂಬ ವಿಚಾರ ತನಿಖೆಯಿಂದ ಬಯಲಾಗಬೇಕಿದೆ.

Advertisement
Advertisement
Advertisement
Previous Post

ಅಮೆರಿಕದಲ್ಲಿ ಅಪಘಾತ – ಸಾವಿಗೀಡಾಗಿದ್ದ ಭಾರತದ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ಪರಿಹಾರ..!!

Next Post

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

OtherNews

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!
Featured

ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!

April 2, 2026
ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.!
ಕ್ರೈಮ್

ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.!

April 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

April 2, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!
Featured

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page