ಮೈಸೂರು: ನಮಾಜ್ ಸಮಯದಲ್ಲಿ ಮಸೀದಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಮೈಸೂರಿನ ಎನ್ ಆರ್ ಮೊಹಲ್ಲಾದ ಮಸೀದಿಯಲ್ಲಿ ನಡೆದಿದೆ.
ಫೆಬ್ರವರಿ 13 ಶುಕ್ರವಾರ ನಮಾಜ್ ವೇಳೆ ಮೊದಲು ಮಾತಿನ ಜಗಳ ನಡೆದಿದ್ದು, ಬಳಿಕ ಬಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಇದಕ್ಕಿಂತಲೂ ಕ್ರೂರವಾಗಿ ಕಾಲಿನಿಂದ ಒದ್ದು ಕ್ರೌರ್ಯ ಮೆರೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋದಲ್ಲಿ ಬಾಲಕನನ್ನು ಅಟ್ಟಾಡಿಸಿ ಹಲ್ಲೆ ಮಾಡುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ಕಾಣುತ್ತಿವೆ.
ಘಟನೆ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಹಲ್ಲೆ ಮಾಡಿದವರು ಅವೇಜ್, ಪರವೇಜ್, ಜಹೀದ್ ಹಾಗೂ ಉಮ್ಮರ್ ಅನ್ನೋ ಆರೋಪ ಕೇಳಿ ಬಂದಿದೆ. ಈ ತಂಡದಲ್ಲಿ ರೌಡಿಶೀಟರ್ ಒಬ್ಬ ಇದ್ದಾನೆ ಅನ್ನೋದು ಬಾಲಕನ ತಂದೆಯ ಗಂಭೀರ ಆರೋಪ. ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದವರು ಎಸ್ಕೇಪ್ ಆಗಿದ್ದಾರೆ. ನಶೆಯಲ್ಲಿ ಹಲ್ಲೆ ಮಾಡಿದ್ದಾರೆ ಅನ್ನೋ ಆರೋಪದ ಮೇಲೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


























