ಬೆಳ್ತಂಗಡಿ : ತಾಲೂಕಿನ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು ( 28) ಶಬರಿಮಲೆ ಯಾತ್ರೆಗೆ ತೆರಳಿದ್ದು, ಈ ವೇಳೆ ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ವರದಿಯಾಗಿದೆ.
ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದು, ಜನಮನ್ನಣೆ ಪಡೆದ್ದರು.
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದ ಸಕ್ರಿಯ ಕಾರ್ಯಕರ್ತ, ಗೋಪಾಲಕೃಷ್ಣ ಭಜನಾ ಮಂದಿರದ ಮಾಜಿ ಅಧ್ಯಕ್ಷರು, ಫ್ರೆಂಡ್ಸ್ ತೆಕ್ಕಾರು ತಂಡದ ಸಕ್ರಿಯ ಕಾರ್ಯಕರ್ತ ಮತ್ತು ವಿಶ್ವ ಹಿಂದೂ ಪರಿಷತ್ ಭಜರಂಗದಳ ಉಪ್ಪಿನಂಗಡಿ ಪ್ರಖಂಡದ ಸುರಕ್ಷಾ ಪ್ರಮುಖ ಆಗಿ ಸೇವೆ ಸಲ್ಲಿಸಿದ್ದರು.
ಮೃತರ ಅಂತಿಮ ದರ್ಶನವು ನಾಳೆ ಬೆಳಿಗ್ಗೆ 7ರಿಂದ 9ರ ತನಕ ಅವರ ಸ್ವ ಗೃಹದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ.

























