ಮಂಗಳೂರು: ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉಳ್ಳಾಲ ತಾಲೂಕಿನ ಕಿನ್ಯಾ ಬಳಿ ಸೋಮವಾರ ಸಂಜೆ ಸಂಭವಿಸಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ವಿಜಯಪುರ ಮತ್ತು ಬಾಗಲಕೋಟೆಯ ವೈದ್ಯಕೀಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಡಿಕ್ಕಿಯ ಬಲಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ ಎಂದು ವರದಿಯಾಗಿದೆ. ಸವಾರ ಮತ್ತು ಹಿಂಬದಿ ಸವಾರ ಇಬ್ಬರೂ ಗಾಯಗೊಂಡಿದ್ದಾರೆ, ಘಟನೆಯ ಬಗ್ಗೆ ಇದುವರೆಗೆ ಯಾವುದೇ ಔಪಚಾರಿಕ ಪೊಲೀಸ್ ದೂರು ದಾಖಲಾಗಿಲ್ಲ.

























