ಪುತ್ತೂರು: ಪುತ್ತೂರು ಹಾರಾಡಿ ಸಮೀಪದ ರೈಲ್ವೇ ಹಳಿಯಲ್ಲಿ ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯರು ಮೃತದೇಹವನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

























