ಬೆಂಗಳೂರು: ನಗರದಲ್ಲಿ ಛಲವಾದಿಪಾಳ್ಯದ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಮೇಲೆ ಹಲ್ಲೆಗೈದು ಕೊಲೆ ಮಾಡಲಾಗಿದೆ.
ಈ ಹಿಂದೆ ರೇಖಾ ಅವರ ಪತಿ ಕದಿರೇಶ್ ಅವರ ಹತ್ಯೆ ನಡೆದಿತ್ತು. ಇಂದು ದುಷ್ಕರ್ಮಿಗಳು, ಛಲವಾದಿ ಪಾಳ್ಯದ ಫ್ಲವರ್ ಗಾರ್ಡನ್ನಲ್ಲಿ ರೇಖಾ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಕೂಡಲೇ ರೇಖಾರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಮತ್ತು ಕಾಟನ್ ಪೇಟೆ ಪೊಲೀಸರು ದೌಡಾಯಿಸಿದ್ದಾರೆ.



























