ಬೈಂದೂರು : ಹಳ್ಳಿಹೊಳೆ ಗ್ರಾಮದ ಸುಳಗೋಡು ಶಾಲೆಯಲ್ಲಿ ನಡೆಯುತ್ತಿರುವ ಎನ್‌ಎಸ್‌ಎಸ್ ಶಿಬಿರಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾಲೇಜು ಬಸ್, ಹಳ್ಳಿಹೊಳೆ ಗ್ರಾಮದ ಶೆಟ್ಟಿಪಾಲು ಬಳಿ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಅಪಘಾತ ಸಂಭವಿಸಿದೆ.
ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.


























