ಪುತ್ತೂರು: ಬಸ್ ನಲ್ಲಿ ಯುವತಿ ಜತೆ ಅನುಚಿತ ವರ್ತನೆ ಆರೋಪದ ಹಿನ್ನಲೆ ಯುವಕನಿಗೆ ಸಾರ್ವಜನಿಕರು ಗೂಸಾ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸರು ಪರಿಸ್ಥಿತಿ ತಿಳಿ ಗೊಳಿಸಿ ಅವರನ್ನು ವಶಕ್ಕೆ ಪಡೆದಿದ್ದಾರೆ ಬಳಿಕ ಮಹಿಳಾ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಯುವಕ ಯುವತಿ ಇಬ್ಬರೂ ಸುಳ್ಯ ತಾಲೂಕಿನವರು ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.



























