ಪುತ್ತೂರು : ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.24 ರಂದು ಬಡಗನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲಡ್ಕ ಸಮೀಪ ನೇರಲ್ತಡ್ಕ ದಲ್ಲಿ ನಡೆದಿದೆ.
ಮೃತರನ್ನು ಪಾಲಡ್ಕ ನಿವಾಸಿ ಶರತ್ (22) ಎಂದು ಗುರುತಿಸಲಾಗಿದ್ದು, ಪಾದಕೇರಿಯ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿ ಶರತ್ ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ.