ಉಡುಪಿ ಜಿಲ್ಲೆಯ ಶಂಕರಪುರದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ.
ಸಾಲ್ಮರ ಕ್ಯಾಟರಿಂಗ್ ಶೆಡ್ ಸಮೀಪದ ಒಂದು ಕೊಠಡಿಯಲ್ಲಿ ಗೌತಮ್ ಪೂಜಾರಿಯವರ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಿಗೆ ವಿಷಯ ತಿಳಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಸಾವಿಗೆ ಮುನ್ನ ಅವರು ಡೆತ್ನೋಟ್ ಬರೆದಿರುವುದಾಗಿ ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಗೌತಮ್ ಪೂಜಾರಿ ಅವಿವಾಹಿತರಾಗಿದ್ದು, ಕ್ಯಾಟರಿಂಗ್ ಸಂಸ್ಥೆಯಲ್ಲಿ ಹೆಡ್ ಕುಕ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸಮಾಜಮುಖಿ ಚಟುವಟಿಕೆಗಳಲ್ಲೂ ಅವರು ಸಕ್ರಿಯರಾಗಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.

























