ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಸೋಮವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಿನಿ ಗೂಡ್ಸ್ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತರನ್ನು 30 ವರ್ಷದ ಲೆಸ್ಟರ್ ಡೇವಿಡ್ ಡಿ’ಸೋಜಾ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಸಾಗುತ್ತಿದ್ದ ಮಿನಿ ಗೂಡ್ಸ್ ಟೆಂಪೋ, ಎದುರು ದಿಕ್ಕಿನಿಂದ ಮೂಡುಬಿದಿರೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಯಿಂದ ಟೆಂಪೋ ಚಾಲಕ ಲೆಸ್ಟರ್ ಡೇವಿಡ್ ಡಿ’ಸೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
























