ಮಂಗಳೂರು ಸಮೀಪದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ದಿನಾಂಕ 18-03-2026 ರಂದು ನೀಡಲಾದ ದೂರಿನ ಮೇರೆಗೆ, ಆರೋಪಿಯು ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಿಳಿದುಬಂದಿದೆ. ಅಲ್ಲದೆ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದೂ ತನಿಖೆಯಲ್ಲಿ ಬಹಿರಂಗವಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ POCSO ಕಾಯ್ದೆಯ ಸೆಕ್ಷನ್ 4, 6, 12 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯ ಸೆಕ್ಷನ್ 75 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬಂಧಿತ ಆರೋಪಿಯನ್ನು ಆಶೀಶ್ ಪೂಜಾರಿ (33) ಎಂದು ಗುರುತಿಸಲಾಗಿದ್ದು, ಮಡ್ಯಾರ್ ನಿವಾಸಿಯಾಗಿದ್ದಾನೆ. ಈತ MSC ಲಾಜಿಸ್ಟಿಕ್ಸ್, ಬಿಜೈನಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.
ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


























