ಪುತ್ತೂರು: ಇಲ್ಲಿನ ಏಳ್ಮುಡಿ ಬಳಿ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪುತ್ತೂರಿನಿಂದ ದರ್ಬೆ ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ದರ್ಬೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ರಿಕ್ಷಾ ಏಳ್ಮುಡಿ ಸಮೀಪ ಮುಖಾಮುಖಿಯಾಗಿ ಡಿಕ್ಕಿ ಹೊಡೆದವು.
ಈ ಸಂದರ್ಭ ರಿಕ್ಷಾ ಚಾಲಕ ವಾಹನವನ್ನು ಆಕಸ್ಮಿಕವಾಗಿ ತಪ್ಪು ದಿಕ್ಕಿಗೆ ತಿರುಗಿಸಿದ್ದರಿಂದ ಬೈಕ್ ಸವಾರ ನಿಯಂತ್ರಣ ತಪ್ಪಿ ರಿಕ್ಷಾಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.
ಡಿಕ್ಕಿಯ ಪರಿಣಾಮವಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.


























