ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೋಡಿ ಪ್ರದೇಶದಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಯಲ್ಲಿ ಗಲಾಟೆ ನಡೆದು, ಸಿಬ್ಬಂದಿಗೆ ಹಲ್ಲೆ ಹಾಗೂ ಆಸ್ತಿಗೆ ಹಾನಿಯಾದ ಘಟನೆ ವರದಿಯಾಗಿದೆ.
ಫಿರ್ಯಾದುದಾರರಾದ ಕುನಲ್ ಭುಹ್ನಿಯಾ (27) ಅವರು ಗ್ಯಾಸ್ ಪಂಪ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮಾರ್ಚ್ 20, 2026ರಂದು ಸಂಜೆ, ಕೆಎ 19 ಎಸಿ 2102 ನೋಂದಣಿ ಸಂಖ್ಯೆಯ ಆಟೋರಿಕ್ಷಾವನ್ನು ಚಾಲನೆ ಮಾಡುತ್ತಿದ್ದ ಅಫ್ರೀಝ್ (28), ಸಜಿಪಮೂಡಾ ನಿವಾಸಿ, ಏಜೆನ್ಸಿಗೆ ಬಂದು ಕಛೇರಿಗೆ ನುಗ್ಗಿದ್ದಾನೆ. ಈ ವೇಳೆ ಕಚೇರಿ ಸಿಬ್ಬಂದಿ ಅಶ್ವಿನ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಂತರ ಹೊರಬಂದು ಗ್ಯಾಸ್ ಪಂಪ್‌ನ ಆಸ್ತಿಪಾಸ್ತಿಗಳಿಗೆ ಹಾನಿ ಉಂಟುಮಾಡಿ ಸುಮಾರು ₹48,000 ಮೌಲ್ಯದ ನಷ್ಟಕ್ಕೆ ಕಾರಣನಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 115(2), 287, 324(4), 351(2) ಮತ್ತು 352ರಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.


























