ಸುಳ್ಯ: ಗಾಂಜಾ ಮಾರಾಟ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿ ಉತ್ತರ ಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುಳ್ಯ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 328/2016ರಲ್ಲಿ, NDPS ಕಾಯ್ದೆಯ ಕಲಂ 8(c) ಹಾಗೂ 20(b) ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಾಗೂ LPC No: 11/2024ರ ಪ್ರಕಾರ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಆರೋಪಿ ನಸೀಮ್ ಎಂಬಾತನನ್ನು ಬಂಧಿಸಲಾಗಿದೆ.
ಸುಮಾರು ದಶಕದ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿದ ಸುಳ್ಯ ಠಾಣಾ ಸಿಬ್ಬಂದಿಗಳಾದ ಹೆಡ್ ಕಾನ್ಸ್‌ಟೇಬಲ್ ರಮೇಶ್ ಎಲ್ (HC 359), ಹೆಡ್ ಕಾನ್ಸ್‌ಟೇಬಲ್ ರಾಜು ನಾಯ್ಕ್ ಡಿ (HC 368), ಮತ್ತು ಪೊಲೀಸ್ ಕಾನ್ಸ್‌ಟೇಬಲ್ ವಿಖ್ಯಾತ್ ಜೆ ಗೌಡ (PC 629) ಅವರ ತಂಡವು, ಉತ್ತರ ಪ್ರದೇಶದ ಖಾಜಿಪುರದಲ್ಲಿ 20-03-2026ರಂದು ದಸ್ತಗಿರಿ ಮಾಡಿದೆ.
ಬಂಧಿತ ಆರೋಪಿಯನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


























