ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕರ್ವೇಲು ಪ್ರದೇಶದಲ್ಲಿ ನಡೆದಿದೆ.
ಮಾರ್ಚ್ 22, 2026ರಂದು ಸಂಜೆ ವೇಳೆ, ಕರ್ವೇಲು ಪ್ರದೇಶದಲ್ಲಿ ಯುವಕನೊಬ್ಬ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸರು ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಯುವಕನನ್ನು ವಿಚಾರಿಸಿದಾಗ, ಆತ ಕೇರಳದ ಕಾಸರಗೋಡು ಮೂಲದ ಯೂಸುಫ್ ಸಿ.ಇ (28) ಎಂದು ಗುರುತಿಸಲಾಯಿತು.
ಪೊಲೀಸರು ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಯುವಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಪರೀಕ್ಷೆಯಲ್ಲಿ ಆತ ಮಾದಕದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 42/2026ರಂತೆ, NDPS ಕಾಯ್ದೆಯ ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.



























