ನವದೆಹಲಿ: ಇಸ್ರೇಲ್ ರಾಯಭಾರ ಕಚೇರಿಯ ಬಳಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಲಡಾಖ್ ಮೂಲದ ನಾಲ್ವರು ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಬಂಧಿತರನ್ನು ಕಾರ್ಗಿಲ್‌ನ ಥಾಂಗ್ ಗ್ರಾಮದ ನಿವಾಸಿಗಳಾದ ನಜೀರ್ ಹುಸೇನ್ (26), ಜುಲ್ಫಿಕರ್ ಅಲಿ ವಜೀರ್ (25), ಐಯಾಜ್ ಹುಸೇನ್ (28) ಮತ್ತು ಮುಜಮ್ಮಿಲ್ ಹುಸೇನ್ (25) ಎಂದು ಗುರುತಿಸಲಾಗಿದೆ.
ಇಸ್ರೇಲ್ ರಾಯಭಾರ ಕಚೇರಿಯ ಬಳಿ ನಡೆದ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ವಿಶೇಷ ತಂಡ ಲಡಾಖ್‌ನ ಕಾರ್ಗಿಲ್‌ನಲ್ಲಿ ವಿದ್ಯಾರ್ಥಿಗಳನ್ನು ಬಂಧಿಸಿ ದೆಹಲಿಗೆ ಕರೆ ತಂದಿದ್ದಾರೆ ಎಂದು ವರದಿಯಾಗಿದೆ.