ಸುಳ್ಯ: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೆಸ್ಕಾಂ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಬೈಕ್ ಸವಾರ ಲೋಕನಾಥ (35) ಎಂಬವರು ಮೃತಪಟ್ಟ ವ್ಯಕ್ತಿ.
ಸುಳ್ಯದಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು.
ಅಲ್ಲಿ ಅವರಿಗೆ ಚಿಕಿತ್ಸೆ ಫಲಿಸದೇ ಮೃತಪಟ್ಟರೆನ್ನಲಾಗಿದೆ. ಸುಳ್ಯ ಮೆಸ್ಕಾಂ ನಲ್ಲಿ ಗುತ್ತಿಗೆ ಆಧಾರದಲ್ಲಿ ಮೀಟರ್ ರೀಡಿಂಗ್ ಕೆಲಸ ನಿರ್ವಹಿಸುತ್ತಿದ್ದರು.



























