ಬೆಳ್ಳಾರೆಯಲ್ಲಿ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರು ಗುದ್ದಿ ಗಂಭೀರ ಗಾಯವಾದ ಘಟನೆ ಇಂದು ಸಂಜೆ ನಡೆದಿದೆ.
ಮಾರುತಿ 800 ಕಾರು ಮತ್ತು ಬ್ರೀಜಾ ಕಾರುಗಳು ಡಿಕ್ಕಿ ಹೊಡೆದುಕೊಂಡವು ಡಿಕ್ಕಿ ಹೊಡೆದುಕೊಂಡ ಪರಿಣಾಮ ಅಲ್ಲಿಯೇ ಹತ್ತಿರದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾರು ಗುದ್ದಿದೆ. ಕಾರು ಗುದ್ದಿದ ಪರಿಣಾಮ ಪೆರುವಾಜೆಯ ಓರ್ವನಿಗೆ ಗಂಭೀರ ಗಾಯವಾಗಿದೆ.
ಗಾಯಗೊಂಡವರನ್ನು ಕೂಡಲೇ ಸುಳ್ಯದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.



























