ಮಂಗಳೂರು, ಮಾರ್ಚ್ 28: ಶ್ರೀನಿವಾಸ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವ ಇಂದು ಮುಕ್ಕ ಕ್ಯಾಂಪಸ್‌ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ರಾಘವೇಂದ್ರ ಶ್ರೀನಿವಾಸ್ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಮಧ್ಯಾಹ್ನದ ಅಧಿವೇಶನದಲ್ಲಿ ಕೆಐಒಸಿಎಲ್ ಲಿಮಿಟೆಡ್‌ನ ನಿರ್ದೇಶಕ ಗಾಂತಿ ವೆಂಕಟ್ ಕಿರಣ್ ಉಪಸ್ಥಿತರಿರಲಿದ್ದಾರೆ.
ಈ ಘಟಿಕೋತ್ಸವದಲ್ಲಿ ಒಟ್ಟು 2769 ಪದವೀಧರರು (626 ಸ್ನಾತಕೋತ್ತರ ಮತ್ತು 2023 ಪದವಿ) ಪ್ರಮಾಣಪತ್ರ ಸ್ವೀಕರಿಸಲಿದ್ದಾರೆ. 48 ಮಂದಿ ವಿದ್ಯಾರ್ಥಿಗಳು ಕುಲಾಧಿಪತಿಗಳ ಚಿನ್ನದ ಪದಕ. ಜೊತೆಗೆ 1 ಡಿ.ಎಸ್‌ಸಿ., 1 ಡಿ.ಲಿಟ್. ಹಾಗೂ 118 ಪಿಎಚ್.ಡಿ ಪದವಿಗಳನ್ನು ಪ್ರದಾನ ಮಾಡಲಾಗುವುದು . ಮಣಿಪಾಲ ಮೀಡಿಯಾ ನೆಟ್‌ವರ್ಕ್ ಲಿಮಿಟೆಡ್‌ನ ನಿರ್ದೇಶಕರಾದ ಟಿ. ಸತೀಶ್ ಯು. ಪೈ ಅವರಿಗೆ ಗೌರವ ಡಿ.ಲಿಟ್ ಪದವಿ ನೀಡಿ ಸನ್ಮಾನಿಸಲಾಗುವುದು.
ಮಾರ್ಚ್ 29ರಂದು ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಪದವಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ಟಾಟಾ ಕನ್ಸಲ್ಟನ್ಸಿ ಸರ್ವಿಸಸ್‌ನ ಅರವಿಂದ ಹೊಳ್ಳ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ 1058 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ.
ಮಾರ್ಚ್ 30ರಂದು ವಿದ್ಯಾರ್ಥಿಗಳ ಪ್ರತಿಭಾ ದಿನಾಚರಣೆ ನಡೆಯಲಿದ್ದು, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಒದಗಿಸಲಾಗುತ್ತದೆ.
ಮಾರ್ಚ್ 31ರಂದು ಸಂಸ್ಥಾಪಕರ ದಿನಾಚರಣೆ ಹಾಗೂ ಕಾಲೇಜು ದಿನಾಚರಣೆ ನಡೆಯಲಿದ್ದು, ನ್ಯೂ ಮಂಗಳೂರು ಪೋರ್ಟ್ ಅಥಾರಿಟಿಯ ಉಪಾಧ್ಯಕ್ಷೆ ಎಸ್. ಶಾಂತಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಅಧ್ಯಕ್ಷತೆ ವಹಿಸಲಿದ್ದು. ಈ ಸಂದರ್ಭದಲ್ಲಿ ಮಾಜಿ ಕುಲಾಧಿಪತಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ಅವರ ಸೇವೆಯನ್ನು ಸ್ಮರಿಸಲಾಗುವುದು.
1988ರಲ್ಲಿ ಕೇವಲ 7 ವಿದ್ಯಾರ್ಥಿಗಳೊಂದಿಗೆ ಆರಂಭವಾದ ಶ್ರೀನಿವಾಸ ಸಂಸ್ಥೆಗಳು ಇಂದು 12,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವುದು ಗಮನಾರ್ಹ. ವಿವಿಧ ಕ್ಷೇತ್ರಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಾ ಸಂಸ್ಥೆ ಅನೇಕ ಮೈಲಿಗಲ್ಲುಗಳನ್ನು ಸಾಧಿಸಿದೆ.
ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ವರ್ಷ ಎ. ಶಾಮರಾವ್ ಸ್ಮಾರಕ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಡಾ. ವೇದಾವತಿ ಬಿ. ಹಾಗೂ ಶ್ರೀ ರಾಜೇಶ್ ಕದ್ರಿ ಅವರಿಗೆ ಲಭಿಸಿದೆ. ಜೊತೆಗೆ ಸುಮಾರು 200ಕ್ಕೂ ಹೆಚ್ಚು ಅಧ್ಯಾಪಕರಿಗೆ ವಿಶೇಷ ಸನ್ಮಾನ ನೀಡಲಾಗುತ್ತದೆ.
ಪತ್ರಿಕಾಗೋಷ್ಠಿಯಲ್ಲಿ ಡಾ. ಅನಿಲ್ ಕುಮಾರ್, ಡಾ. ಶ್ರೀನಿವಾಸ್ ಮಯ್ಯ, ಡಾ. ಅಜಯ್ ಕುಮಾರ್ ಹಾಗೂ ಡಾ. ರಾಮಕೃಷ್ಣ ಶಬರಾಯ ಉಪಸ್ಥಿತರಿದ್ದರು.


























