ಶನಿವಾರ ಸಂಜೆ ನಾವುಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗಳು ಮೃತಪಟ್ಟಿದ್ದು, ಇನ್ನೂ ನಾಲ್ವರು ಗಾಯಗೊಂಡಿದ್ದಾರೆ.
ಮೃತರನ್ನು ಮಮತಾ (36) ಹಾಗೂ ಅವರ ಪುತ್ರಿ ದೃತಿಕಾ (14) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮಮತಾ ಅವರ ಪತಿ ರಾಘು (ನೆಲಮಂಗಲ ನಿವಾಸಿ), ಪುತ್ರಿ ಜಾಹ್ನವಿ, ಹಾಗು ಕಾರಿನಲ್ಲಿ ಇದ್ದ ಚಾರ್ವಿ ಮತ್ತು ಕಿರಣ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇವರು ಬೆಂಗಳೂರಿನಿಂದ ಉಡುಪಿಗೆ ಆಗಮಿಸಿ ಗೋಕರ್ಣದತ್ತ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.



























