ಮಂಗಳೂರು : ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಸಭೆಯು ಮಂಗಳೂರಿನ ಕಾಂಗ್ರೆಸ್ ಭವನ ದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕದ ಘಟಕದ ಅಧ್ಯಕ್ಷ ಲಾರೆನ್ಸ್ ಡಿ ಸೋಜಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶರೋನ್ ಸಿಕ್ವೇರಾ ರವರಿಗೆ ದ ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ರವರು ನೇಮಕಾತಿ ಆದೇಶವನ್ನು ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ್ ರೈ, ಯು ಟಿ ಖಾದರ್, ಮಾಜಿ ಶಾಸಕರಾದ ಜೆ ಆರ್ ಲೋಬೊ, ಎ ಐ ಸಿ ಸಿ ಕಾರ್ಯದರ್ಶಿಗಳಾದ ಪಿ ವಿ ಮೋಹನ್, ಮಾಜಿ ರಾಜ್ಯಸಭಾ ಸದಸ್ಯ ಬಿ ಇಬ್ರಾಹಿಂ, ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ ಕೆ ಶಾಹುಲ್ ಹಮೀದ್, ಕಾಂಗ್ರೆಸ್ ನಾಯಕರುಗಳಾದ ಸದಾಶಿವ ಉಳ್ಳಾಲ್, ಸಂತೋಷ ಕುಮಾರ್ ಶೆಟ್ಟಿ, ಸದಾಶಿವ ಶೆಟ್ಟಿ, ಬೇಬಿ ಕುಂದರ್, ಎ ಸಿ ವಿನಯರಾಜ್, ಸಲೀಮ್ ಮೊದಲಾದವರು ಉಪಸ್ಥಿತರಿದ್ದರು.