ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಏ.1ರಂದು ಗೊನೆ ಮುಹೂರ್ತ ನಡೆಯಿತು.
ಬೆಳಿಗ್ಗೆ ಗಂಟೆ 9.15ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಿತು .
ಗೊನೆ ಮುಹೂರ್ತವಾದ ಬಳಿಕ, ಮಧ್ಯಾಹ್ನ ಕೊಟ್ಟಿಬೆಟ್ಟು ಏಳ್ಳಾಡುಗುತ್ತು ಕುಟುಂಬಸ್ಥರಿಂದ ಅನ್ನಸಂತರ್ಪಣೆ ನಡೆಯಲಿದೆ.
ಏ.10ರಂದು ಧ್ವಜಾರೋಹಣದ ಮೂಲಕ ಜಾತ್ರೆಗೆ ಚಾಲನೆ ದೊರೆಯಲಿದೆ.ಪ್ರತಿ ದಿನ ಸಂಜೆ ಉತ್ಸವ, ಪೇಟೆ ಸವಾರಿ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.



























