ಪುತ್ತೂರು: ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಮೀನಾವು ಪ್ರದೇಶದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ತೆಂಗಿನ ಮರ ಕಡಿಯುವ ವೇಳೆ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಮೃತರನ್ನು ಪುತ್ತೂರು ಕುರಿಯ ಗ್ರಾಮದ ಶೀನಪ್ಪ ಗೌಡ ಎಂದು ಗುರುತಿಸಲಾಗಿದೆ. ಇವರು ತೆಂಗಿನ ಮರ ಕಡಿಯುತ್ತಿದ್ದ ಸಂದರ್ಭದಲ್ಲಿ ಕೆಳಗೆ ಬಿದ್ದ ಪರಿಣಾಮ ತೀವ್ರ ಗಾಯಗೊಂಡಿದ್ದರು.
ಗಾಯಗೊಂಡ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಮಹಾವೀರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಸ್ತುತ ಮೃತದೇಹವನ್ನು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಮೃತರ ಮಗ ರಿತೇಶ್ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

























