ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಬುಧವಾರ ರಾತ್ರಿ ಸುಮಾರು 12:45 ಗಂಟೆಗೆ ಈ ಘಟನೆ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂಬವನ್ನೇ ಎಳೆದುಕೊಂಡು ಹೋಗಿ ಬಳಿಕ ಪಲ್ಟಿಯಾಗಿದೆ. ಕಾರಿನಲ್ಲಿ ಸುಮಾರು 4 ಮಂದಿ ವಿದ್ಯಾರ್ಥಿನಿಯರು ಹಾಗೂ 3 ಮಂದಿ ವಿದ್ಯಾರ್ಥಿಗಳು ಇದ್ದರು. ಪಲ್ಟಿಯಾದ ಕಾರನ್ನು ಎತ್ತಿ ಅವರನ್ನೆಲ್ಲ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


























