ಪುತ್ತೂರು: ಕರ್ನಾಟಕದಲ್ಲಿ ಲಾಟರಿ ಮಾರಾಟ ನಿಷೇಧವಾಗಿದ್ದರೂ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ಕಬಕದಲ್ಲಿ ಕೆಲವು ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.
ಈ ವೇಳೆ ಬೀಡಾ ಅಂಗಡಿಯೊಂದರಲ್ಲಿ ಕೇರಳ ಲಾಟರಿ ಟಿಕೇಟ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಬಕ ಜಂಕ್ಷನ್‌ನಲ್ಲಿರುವ ಪಾನ್ ಬೀಡಾ ಅಂಗಡಿಯಲ್ಲಿ ಅಧಿಕೃತ ಪರವಾನಿಗೆ ಇಲ್ಲದೆ ಮಾರಾಟ ಮಾಡಲು ತಂದಿಡಲಾಗಿತ್ತೆನ್ನಲಾದ 50ಕ್ಕೂ ಮಿಕ್ಕಿ ಕೇರಳ ಲಾಟರಿ ಟಿಕೆಟ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಅವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.


























