ಪುತ್ತೂರು: ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರದ 2025–2026ನೇ ಸಾಲಿನ ಲೆಕ್ಕಪತ್ರ ಮಂಡನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಏಪ್ರಿಲ್ 5ರಂದು ಯಶಸ್ವಿಯಾಗಿ ನಡೆಯಿತು.
ಸಭೆಯಲ್ಲಿ ಗೌರವಾಧ್ಯಕ್ಷರಾಗಿ ಬಾಲಕೃಷ್ಣ ಮಲ್ತೊಟ್ಟು ಅವರನ್ನು ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಪ್ರಜ್ವಲ್ ಜೆ.ಕೆ (ಪಡ್ಡಾಯೂರು) ಹಾಗೂ ಕಾರ್ಯದರ್ಶಿಯಾಗಿ ಬಾಲಸುಬ್ರಹ್ಮಣ್ಯ ಪಿ.ಎಸ್ (ಪಡ್ಡಾಯೂರು) ಆಯ್ಕೆಯಾದರು.
ಇದೇ ವೇಳೆ ಉಪಾಧ್ಯಕ್ಷರಾಗಿ ವಿಮಲ ಪಡ್ಡಾಯೂರು, ಜಂಟಿ ಕಾರ್ಯದರ್ಶಿಯಾಗಿ ವಿಜಯ ಮಲ್ತೊಟ್ಟು ಹಾಗೂ ಕೋಶಾಧಿಕಾರಿಯಾಗಿ ಮೋಹನ್ ಎನ್ (ಪಡ್ಡಾಯೂರು) ಅವರನ್ನು ಆಯ್ಕೆ ಮಾಡಲಾಯಿತು. ಜೊತೆಗೆ ಸಮಿತಿಗೆ ನೂತನ ಸದಸ್ಯರನ್ನೂ ನೇಮಕ ಮಾಡಲಾಗಿದೆ.
ಸಭೆಯಲ್ಲಿ ಮಂದಿರದ ಮುಂದಿನ ವರ್ಷದ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಯಿತು.



























