ಕಡಬ ಠಾಣಾ ಪೊಲೀಸರಿಂದ ಅಕ್ರಮ ಜಾನುವಾರು ಸಾಗಾಟದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳದತ್ತ ಕಂಟೇನರ್ ವಾಹನದಲ್ಲಿ ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ವಾಹನವನ್ನು ತಡೆದು ಪರಿಶೀಲಿಸಿದರು.
ಸಬ್ ಇನ್ಸ್‌ಪೆಕ್ಟರ್ ಜಂಬೂರಾಜ್ ಮಹಾಜನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡವು ಸುಮಾರು 19 ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಪತ್ತೆಹಚ್ಚಿತು.
ಈ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.
ಬಂಧಿತನನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.




























